ಸವಿತಾ ಮಹರ್ಷಿ ಜಯಂತಿ ಆಚರಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸವಿತಾ ಸಮಾಜ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಮಂಗಳವಾರ ನಗರದ ಸರಕಾರಿ ನೌಕರರ ಸಂಘದ ನಂದಿನಿ ಸಭಾಂಗಣದಲ್ಲಿ ನೆರವೇರಿತು.

ಈ ಸಂದರ್ಭ ಉಪನ್ಯಾಸ ನೀಡಿದ ಲೇಖಕ ಟಿ.ಏ.ಎನ್. ಖಂಡಿಗೆ ಮಾತನಾಡಿ, ಸವಿತಾ ಸಮಾಜ ಸವಿತಾ ಮಹರ್ಷಿಯನ್ನು ಆದರ್ಶವೆಂದು ಸ್ವೀಕರಿಸದವರು.
ಕಾಯಕ ತತ್ವದ ಮೂಲಕ ಮಾಡುವ ಕೆಲಸಗಳಿಗಿಂತ ಬೌದ್ಧಿಕ ಕೆಲಸಗಳಿಗೆ ಪ್ರಾಮುಖ್ಯತೆ ದೊರೆಯುತ್ತಾ ಸಾಗಿದಂತೆ ಅನೇಕ ಕಾಯಕ ತತ್ವಾಧರಿತ ಕೆಲಸಗಳು ಪ್ರಾಮುಖ್ಯತೆಯನ್ನು ಕಳೆದುಕೊಳ್ಳರಾಂಭಿಸಿದೆ. ಆದರೆ ಕ್ಷೌರ ಸೇರಿದಂತೆ ಇನ್ನೂ ಹಲವಾರು ಕಾಯಕ ತತ್ವಾಧರಿತ ಕೆಲಸಗಳು ಪ್ರಾಮುಖ್ಯತೆ ಕಳೆದುಕೊಂಡಿಲ್ಲ ಆದರೆ ಸಮಾಜದ ಯುವ ಜನತೆ ಅದನ್ನೇ ವೃತ್ತಿಯಾಗಿ ತೆಗೆದುಕೊಳ್ಳುವಷ್ಟು ವಿಸ್ತಾರವನ್ನು ಪಡೆದುಕೊಂಡಿಲ್ಲ, ಆದರೂ ಸಮಾಜದಲ್ಲಿ ಈಗಲೂ ಕಾಯಕತತ್ವಾಧರಿತ ಈ ಕೆಲಸ ಪ್ರಮುಖ ಅವಶ್ಯಕತೆಗಳಲ್ಲಿ ಒಂದಾಗಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಭಂಡಾರಿ ಹೊಸಬೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು.
ಶಾಸಕರಾದ ವೇದವ್ಯಾಸ ಕಾಮತ್ ಭಾವಹಿಸಿ ದರು.
ಮಂಗಳೂರು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುರೇಶ್ ಭಂಡಾರಿ ಬಿಜೈ, ಜಿಲ್ಲಾ ಕಾರ್ಯದರ್ಶಿ ವಸಂತ ಎಂ ಬೆಳ್ಳೂರು ಮತ್ತಿತರರು ಉಪಸ್ಥಿತರಿದ್ದರು.
ರೇಣುಕಾ ಕಾಣಿಯೂರು ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು.