ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದೆದ್ದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯವರೊಂದಿಗೆ ಹಾಜರಿದ್ದರು. ಜನವರಿ 13 ರಂದು ಪ್ರಾರಂಭವಾದ ಮಹಾಕುಂಭದಲ್ಲಿ ಇಲ್ಲಿಯವರೆಗೆ 14 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಕಿರಣ್ ರಿಜಿಜು, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಕೂಡ ಪವಿತ್ರ ಸ್ನಾನ ಮಾಡಿದ್ದಾರೆ. ಇದಲ್ಲದೆ ಅನೇಕ ದೇಶಗಳ ಪ್ರತಿನಿಧಿಗಳು ಕೂಡ ಆಗಮಿಸಿದ್ದರು.