Published On: Wed, Feb 5th, 2025

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ, ಓರ್ವ ಯುವಕ ಸಾವು

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಒಬ್ಬ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ನೆನ್ನೆ (ಫೆ.4) ನಡೆದಿದೆ. ನೋಂದಣಿ ಸಂಖ್ಯೆ ಕೆಎ-21-ಬಿ-4611 ಸಂಖ್ಯೆಯ ರಿಕ್ಷಾವನ್ನು ಮೊಹಮ್ಮದ್ ತೌಫಿಕ್ ಎಂಬ ವ್ಯಕ್ತಿ ಚಲಾಯಿಸುತ್ತಿದ್ದರು. ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಬೈಕ್​​ಗೆ ಢಿಕ್ಕಿ ಹೊಡೆದಿದ್ದಾರೆ. ಸವಾರ ಚೇತನ್ ಕುಮಾರ್ ಬೈಕ್‌ ಹೊಡೆಸುತ್ತಿದ್ದ, ಅವರ ಹಿಂದೆ ಆತನ ಸ್ನೇಹಿತ ಮನೀಶ್‌ ಕೂತ್ತಿದ್ದ, ಈ ವೇಳೆ ರಭಸವಾಗಿ ಬಂದ ರಿಕ್ಷಾ ಡಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೈಕ್​​ ಸವಾರರು ರಸ್ತೆಗೆ ಬಂದಿದ್ದಾರೆ.

ತಕ್ಷಣ ಇಬ್ಬರನ್ನು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಚೇತನ್ ಮೃತಪಟ್ಟಿದ್ದಾರೆ. ಮನೀಶ್ ಕೂಡ ಗಾಯಗೊಂಡಿದ್ದಾರೆ. ಆಟೋ ರಿಕ್ಷಾ ಚಾಲಕ ಮೊಹಮ್ಮದ್ ತೌಫಿಕ್ ಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter