Published On: Thu, Feb 6th, 2025

ಬಂಟ್ವಾಳ:- ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್

ಬಂಟ್ವಾಳ:- ಆಡಳಿತವನ್ನು ಜನರ ಬಾಗಿಲಿಗೆ ಕೊಂಡೊಯ್ದು ಅವರ ಸಮಸ್ಯೆಗಳಿಗೆ ಸ್ಥಳೀಯವಾಗಿ ಸ್ಪಂದಿಸಲು ಜನತಾ ದರ್ಶನ ಕಾರ್ಯಕ್ರಮ ಎಲ್ಲಾ ತಾಲೂಕುಗಳಲ್ಲಿ ನಡೆಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಬುಧವಾರ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಪರವಾದ ಆಡಳಿತ ವ್ಯವಸ್ಥೆ ರೂಪಿಸಲು ಜನತಾ ದರ್ಶನ ಕಾರ್ಯಕ್ರಮ ಮಾಡಲಾಗುತ್ತಿದೆ. ಹಿರಿಯ ಅಧಿಕಾರಿಗಳ ಮೂಲಕ ಈ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತದೆ. ಸರಕಾರದ ವಿವಿಧ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಕ್ಷಿಪ್ರವಾಗಿ ದೊರಕಿಸಲು ಜನತಾ ದರ್ಶನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಜನರಿಗೆ ನೀಡಿದ ಭರವಸೆಯನ್ನು ಪ್ರಾಮಾಣಿಕವಾಗಿ ಈಡೇರಿಸಿದೆ. ಕೋಟ್ಯಾಂತರ ಜನರಿಗೆ ಅತೀ ಕಡಿಮೆ ಅವಧಿಯಲ್ಲಿ ವಿವಿಧ ಆರ್ಥಿಕ ನೆರವು ಯೋಜನೆಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಅವರಿಗೆ ತಲುಪಿಸಿದೆ. ಇಡೀ ದೇಶಕ್ಕೆ ಗ್ಯಾರಂಟಿ ಯೋಜನೆಗಳು ಮಾದರಿಯಾಗಿದೆ ಎಂದು ಸಚಿವರು ತಿಳಿಸಿದರು.ಇಂದು ಬಂಟ್ವಾಳ ತಾಲೂಕಿನ 177 ಮಂದಿಗೆ ಹಕ್ಕುಪತ್ರ ನೀಡಲಾಗುತ್ತಿದ್ದು, ಜನರಿಗೆ ನೆಲದ ಭದ್ರತೆ ನೀಡುವ ಕಾರ್ಯಕ್ರಮವಾಗಿದೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಹರಿಗೆ ಹಕ್ಕು ಪತ್ರ ವಿತರಿಸಲಾಗುತ್ತದೆ ಎಂದು ಹೇಳಿದರು.ಅಧಿಕಾರಿಗಳು ಸಾರ್ವಜನಿಕರನ್ನು ಗೌರವಿಸಿ ಕೆಲಸ ಮಾಡಬೇಕು. ಸರ್ಕಾರಿ ಕೆಲಸದಲ್ಲಿ ಬಡ ಜನರಿಗೆ, ದುರ್ಬಲರಿಗೆ ಆದ್ಯತೆ ನೀಡಬೇಕೆಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ, ಮಾಜಿ ಸಚಿವ ರಮಾನಾಥ ರೈ, ಗೇರು ಅಭಿವೃದ್ಧಿ ನಿಗಮದ ಅಧಕ್ಷೆ ಮಮತಾ ಗಟ್ಟಿ, ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಉಪಾಧ್ಯಕ್ಷ ಮೂನಿಶ್ ಆಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮತ್ತಿತರರು ಉಪಸ್ಥಿತರಿದ್ದರು. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಚಿವರು ಸವಲತ್ತುಗಳನ್ನು ವಿತರಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter