ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಒಂದು ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ.ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ.