ದೆಹಲಿ ಚುನಾವಣೆ ಫಲಿತಾಂಶ: ಪೂರ್ಣ ಬಹುಮತಗಳೊಂದಿಗೆ ಬಿಜೆಪಿಗೆ ದಿಲ್ಲಿ ಗದ್ದುಗೆ, ಆಪ್‌ಗೆ ಹಿನ್ನಡೆ

ದೆಹಲಿ ಚುನಾವಣೆ ಫಲಿತಾಂಶ: ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಸೋಲಿನ ರುಚಿ ಕಂಡಿದ್ದು, ಬರೊಬ್ಬರಿ 26 ವರ್ಷಗಳ ಬಳಿಕ ಬಿಜೆಪಿ ದೆಹಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಈ ಮೂಲಕ ಬಹುಮತ ಸಾಧಿಸಿ 27 ವರ್ಷಗಳ ಬಳಿಕ ಕೇಸರಿ ಪಡೆ ದಿಲ್ಲಿ ಗದ್ದುಗೆ ಹಿಡಿಯುತ್ತಿದೆ. ಇನ್ನು ಆಡಳಿತಾರೂಢ ಆಪ್‌ಗೆ ಭಾರೀ ಹಿನ್ನಡೆಯಾಗಿದ್ದು, 22 ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಿದರೆ, ಕಾಂಗ್ರೆಸ್‌ಗೆ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ.