Published On: Tue, Feb 11th, 2025

ಬಂಟ್ವಾಳದಲ್ಲಿ ಭೀಕರ ಬೆಂಕಿ ಅನಾಹುತ, ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಬಂಟ್ವಾಳದಲ್ಲಿ ಭೀಕರ ಬೆಂಕಿ ಅನಾಹುತ ನಡೆದಿದೆ. ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಅಂತಸ್ತಿನ ಕಟ್ಟಡಗಳಿಗೆ ನಿನ್ನೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅನಾಹುತದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ, ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿದ್ದಾರೆ.

ರಾತ್ರಿ 1.00 ಗಂಟೆ ವೇಳೆ ಈ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಂಟ್ವಾಳದ ಅಗ್ನಿ ಶಾಮಕ ದಳ ಸ್ಥಳಕ್ಕೆ ಬಂದಿದೆ. ಇನ್ನು ಸ್ಥಳಕ್ಕೆ ಧಾವಿಸಿದ ಬಂಟ್ವಾಳದ ಶಾಸಕ ರಾಜೇಶ್ ನಾಯಕ್ ಈ ಕಟ್ಟಡದಲ್ಲಿದ್ದ ಕುಟುಂಬಗಳನ್ನು ಭೇಟಿ ಸಾಂತ್ವನ ಹೇಳಿದ್ದಾರೆ. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter