ಅಕ್ರಮ ಮರುಳುಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್​ ಶಾಸಕ ಬಿ.ಕೆ.ಸಂಗಮೇಶ್ ಮಗ ಅವಾಚ್ಯ ಶಬ್ದಗಳಿಂದ ಬೈದರಿರುವ ವಿಡಿಯೋ ವೈರಲ್ ಆಗಿದೆ. ಭದ್ರಾವತಿ ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರುಳು ಗಣಿಗಾರಿಕೆ ಮೇಲೆ ಗಣಿ ಇಲಾಖೆಯ ಮಹಿಳಾ ವಿಜ್ಞಾನಿ ಸೋಮವಾರ ಮಧ್ಯರಾತ್ರಿ ದಾಳಿ ಮಾಡಿದ್ದರು. ಈ ವೇಳೆ ಶಾಸಕ ಬಿಕೆ ಸಂಗಮೇಶ್​ ಪುತ್ರ ಮಹಿಳಾ ಅಧಿಕಾರಿಗೆ ದೂರವಾಣಿ ಕರೆಯಲ್ಲಿ ಬೇಮು, ನಿಮ್ಮ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಬೈದಿರುವ ವಿಡಿಯೋ ವೈರಲ್ ಆಗಿದೆ.

By suddi9

Leave a Reply

Your email address will not be published. Required fields are marked *