ಬಡಕಬೈಲ್ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಅನಾಹುತ ತಪ್ಪಿಸಿದ ಚಾಲಕ ಆಶೋಕ್
ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಮನೆಗಳಿಗೆ ಬೆಂಕಿಯ ಕೆನ್ನಾಲಗೆ ಚಾಚಿದ್ದು ಪರಿಣಾಮ ಒಟ್ಟು ಸುಮಾರು 40 ಲಕ್ಷ ರೂ.ನಷ್ಟವುಂಟಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ಸ್ಥಳೀಯ ನಿವಾಸಿ,ಗೋಣಿಚೀಲ ವ್ಯಾಪಾರಿ ಮೋನಾಕ ಎಂಬವರಿಗೆ ಸೇರಿದೆಯೆನ್ನಲಾದ ಗೋಣಿಚೀಲ ಗೋದಾಮಿನಲ್ಲಿ ಬೆಂಕಿ ಕಾಣೊಸಿಕೊಂಡು ಬಳಿಕ ಪಕ್ಕದ ಹಮೀದ್,ಜರಿ ಮಹಮ್ಮದ್ ಹಾಗೂ ಇನ್ನೋರ್ವ ಹಮೀದ್ ಎಂಬವರ ಮನೆಯ ಹಂಚಿನ ಛಾವಣಿಗೂ ಬೆಂಕಿ ಕೆನ್ನಾಲಗೆ ಅವರಿಸಿದೆ.

ಅನಾಹುತ ತಪ್ಪಿಸಿದ ಚಾಲಕ ಆಶೋಕ್ :-
ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಬಡಕಬೈಲಿನ ಅಶೋಕ್ ಎಂಬವರು ಬಿಗ್ ಬ್ಯಾಗ್ ಸಂಸ್ಥೆಯ ರಾತ್ರಿ ಪಾಳೆಯದ ನೌಕರರನ್ನು ಮನೆಗೆ ತಲುಪಿಸಿ ವಾಪಾಸಾಗುತ್ತಿದ್ದಾಗ ಮೋನಾಕ್ಕ ಅವರ ಗೋಣಿಚೀಲದ ಗೋದಾಮಿನಿಂದ ದಟ್ಟ ಹೊಗೆ ಮತ್ತು ಬೆಂಕಿ ಜ್ವಾಲೆ ಹೊರಬರುತ್ತಿರುವುದನ್ನು ಗಮನಿಸಿದ್ದು ಅಲ್ಲಿ ಇದ್ದ ನಾಲ್ಕುಮನೆಗಳಿಗೆ ಬೆಂಕಿ ಆವರಸಿಕೊಂಡಿತ್ತು ತಕ್ಷಣ ಅವರು ಸ್ಥಳಕ್ಕೆ ದೌಡಾಯಿಸಿ ಸ್ತಳೀಯರ ಸಹಕಾರದಿಂದ ಬಾಗಿಲು ಬಡಿದು ಅಕ್ಕಪಕ್ಕದ ಮನೆಯವರನ್ನು ಎಬ್ಬಿಸಿದರಲ್ಲದೆ ಬಂಟ್ವಾಳ ಆಗ್ನಿಶಾಮಕ ಠಾಣೆ,ಶಾಸಕರಿಗೂ ಕರೆಮಾಡಿ ಮಾಹಿತಿನೀಡಿದ್ದರು.

ಅದಾಗಲೇ ಗೋದಾಮಿನ ಗೋಣಿಚೀಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಅದರ ಕೆನ್ನಾಲಗೆ ಹಮೀದ್,ಜರಿಮಹಮ್ಮದ್ ,ಹಮೀದ್ ಎಂಬವರ ಮನೆಯ ಹಂಚು,ಮೇಲ್ಚಾವಣಿಗೂ ಅವರಿಸಿತ್ತೆನ್ನಲಾಗಿದೆ.ಈ ಘಟನೆಯಿಂದಾಗಿ ಮೂವರಿಗೆ ತಲಾ ಐದು ಲಕ್ಷ ರೂ.ನಷ್ಟ ಸಂಭವಿಸಿದರೆ, ಮೋನಕ್ಕ ಅವರ ಗೋದಾಮು ಬೆಂಕಿಗಾಹುತಿಯಾಗಿ ಸುಮಾರು 25 ಲಕ್ಷ ರೂ.ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ಧಗಧಗಿಸುತ್ತಿದ್ದ ಬೆಂಕಿಯ ಜ್ವಾಲೆಯನ್ನು ನಂದಿಸಲು ಹರಸಾಹಸ ಪಟ್ಟರು.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ಸುದ್ದಿ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಸ್ಥಳಕ್ಕಾಗಮಿಸಿ ಮನೆಮಂದಿಗೆ ಸಾಂತ್ವನ ಹೇಳಿದರಲ್ಲದೆ ಅಗ್ನಶಾಮಕದಳದ ಸಿಬ್ಬಂದಿಗಳಿಂದ ಮಾಹಿತಿ ಪಡೆದು ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಕರಿಯಂಗಳ ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ,ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಹಾಗೂ ಸ್ಥಳೀಯ ಪ್ರಮುಖರು ಭೇಟಿ ನೀಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಕರಿಯಂಗಳ ಗ್ರಾ.ಪಂ.ಅಧ್ಯಕ್ಷೆ ರಾಧಲೋಕೇಶ್ ,ಉಪಾಧ್ಯಕ್ಷ ರಾಜುಕೋಟ್ಯಾನ್ ,ಪ್ರಭಾರ ಪಿಡಿಒ ವಸಂತಿ,ಮೆಸ್ಕಾಂ ಅಧಿಕಾರಿ ನಾರಾಯಣ ಭಟ್,ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇ ಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಮುಖರಾದ ಬಸೀರ್ ಗಾಣೆಮಾರ್, ಚರಣ್ ಕೃಷ್ಣನಗರ ಹಾಗೂ ಸ್ಥಳೀಯರು ಹೆಚ್ಚಿನ ಶಂಖ್ಯೆಯಲ್ಲಿ ಸೇರಿದ್ದರುಬಂಟ್ವಾಳ ಗ್ರಾಮಾಂತರ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಗೋಣಿ ಗೋದಾಮಿನಲ್ಲಿ
ವಿದ್ಯುತ್ ಶಾಟ್೯ ಸಕ್ಯೂ೯ಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಚಾಲಕ ಅಶೋಕ್ ಬಡಕಬೈಲ್ ಅವರ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ದೊಡ್ಡ ಅನಾಹುತವೊಂದು ತಪ್ಪಿದೆ.