ವಿಜಯಪುರ: ತೀರದಲ್ಲಿ ಮತ್ತೆ ನೆತ್ತರು ಹರಿದಿದೆ: ಭೀಮಾತೀರ ಹಂತಕ ಚಂದಪ್ಪನ ಶಿಷ್ಯನಾಗಿದ್ದ ಬಾಗಪ್ಪ ಹರಿಜನ್ ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಈಗ ರಕ್ತದೋಕುಳಿ ಹರಿದಿದೆ. ಭೀಮಾತೀರದ ಹಂತಕ ಬಾಗಪ್ಪ ಹರಿಜನನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆವಾಗಿ ಹತ್ಯೆ ಮಾಡಿದ್ದಾರೆ. ಇಂದು (ಫೆಬ್ರವರಿ 11) ರಾತ್ರಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ಸಿಕ್ಕ ಸಿಕ್ಕಲಿ ಹೊಡೆದು ಬಾಗಪ್ಪನನ್ನ ಕೊಲೆ ಮಾಡಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಸಲ ಹಂತಕರು ಬಾಗಪ್ಪನನ್ನು ಬಿಡಲಿಲ್ಲ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ಬಾಗಪ್ಪ ವಾಸ ಮಾಡುತ್ತಿದ್ದ. ಇಂದು (ಫೆಬ್ರವರಿ 11) ರಾತ್ರಿ 8.50ರ ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ದಾಳಿ ಮಾಡಿದ್ದಾರೆ. ಸಿಕ್ಕ ಸಿಕ್ಕಲ್ಲಿ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.