ಮಂಗಳೂರು: ಖಾಸಗಿ ಬಸ್ ಚಾಲಕನಿಗೆ ಫಿಟ್ಸ್, ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್

ಖಾಸಗಿ ಬಸ್ ಚಾಲಕನಿಗೆ ಫಿಟ್ಸ್ ಶುರುವಾಗಿ ಆತನ ನಿಯಂತ್ರಣ ತಪ್ಪಿ , ಹಳ್ಳಕ್ಕೆ ಬಿದ್ದಿದೆ. ಈ ಘಟನೆ ಎರ್ಮಾಳು ತೆಂಕ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಳೆ ಚಾಲಕನಿಗೆ ಶಂಭು ಮುಲ್ಕಿಯವರು ಎರ್ಮಳು ತೆಂಕದಲ್ಲಿ ಫಿಟ್ಸ್ ಶುರುವಾಗಿದೆ. ಈ ವೇಳೆ ಆತನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಸಂದರ್ಭ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿ, ವಿದ್ಯುತ್ ತಂತಿಗಳು ತುಂಡಾಗಿದೆ. ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಆಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕ ಶಂಬುರವರು ಚೇತರಿಸುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.