ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಅವಧಿ ವಿಸ್ತರಣೆ : ಪ್ರಭು
ಬಂಟ್ವಾಳ: ಸಹಕಾರ ಸಂಘಗಳಲ್ಲಿನ ಸದಸ್ಯರ ಅನೂಕೂಲಕ್ಕಾಗಿ ಜಾರಿಗೊಂಡಿರುವ ಹಾಗೂ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ.ವಿನ ವೈದ್ಯಕೀಯ ಚಿಕಿತ್ಸಾ ವೆಚ್ಚದ ನಗದು ರಹಿತ ಸೌಲಭ್ಯದೊಂದಿಗೆ ಚಾಲ್ತಿಯಲ್ಲಿರುವಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನವೀಕರಣ,ಹೊಸ ನೋಂದಣಿ ಅವಧಿಯು ಮಾಚ್೯ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ.

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯು 2024-25 ನೇ ಸಾಲಿಗೆ ಸಂಬಂಧಿಸಿದಂತೆ ಮರುಜಾರಿಗೊಳಿಸಲಾಗಿದ್ದು, ಈಗಾಗಲೇ ಈ ಯೋಜನೆ ಅನ್ವಯ ನೋಂದಾಯಿಸಿಕೊಂಡ ಸದಸ್ಯರು ನವೀಕರಣ ಮಾಡಬಹುದಾಗಿದೆ. ಇಷ್ಟರವರೆಗೆ ನೋಂದಾಯಿಸಿಕೊಳ್ಳದ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ ಹೊಸದಾಗಿ ನೋಂದಾಯಿಸಿಕೊಳ್ಳಲು ಅವಕಾಶವಿದೆ ಎಂದು ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.
ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಚಿಸುವ ಸಹಕಾರ ಸಂಘಗಳಲ್ಲಿನ ಸದಸ್ಯರು ಆಧಾರ್ ಕಾರ್ಡ್ , ಪಡಿತರ ಚೀಟಿ ಜೆರಾಕ್ಸ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ತಾವು ಸದಸ್ಯರು ಆಗಿರುವ ಸಂಘದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಸಂಬಂಧ ಪಟ್ಟ ರೈತ ಸದಸ್ಯರು ಯಾವುದಾದರೂ ಒಂದು ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿ 3 ತಿಂಗಳು ಆಗಿದ್ದರೆ ಈ ಯೋಜನೆಗೆ ಅರ್ಹರಾಗುತ್ತಾರೆ.
ಆಸಕ್ತ ರೈತ ಸದಸ್ಯರು ಹಾಗೂ ಕುಟುಂಬದವರು ತಮ್ಮ ಕಾರ್ಯ ವ್ಯಾಪ್ತಿಯ ಸಮೀಪದ ಪ್ರಾಥಮಿಕ ಸಹಕಾರ ಸಂಘಗಳನ್ನು ಸಂಪರ್ಕಿಸಿ ಅಗತ್ಯ ದಾಖಾಲಾತಿಯೊಂದಿಗೆ ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆಯುವಂತೆಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ಕೋರಿದ್ದಾರೆ.