ಬಂಟ್ವಾಳ: ಗ್ರಾಮ ಪಂಚಾಯಿತಿ ಅರಿವು ಕೇಂದ್ರಗಳಿಗೆ ಡಿಜಿಟಲ್ ಸಾಧನ ವಿತರಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಶಿಕ್ಷಣ ಫೌಂಡೇಶನ್ ಡೆಲ್ ಟೆಕ್ನಾಲಜೀಸ್ ಸಂಸ್ಥೆಯ ಸಹಕಾರದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರಗಳಿಗೆ 2024-25 ನೇ ಸಾಲಿನ ಡಿಜಿಟಲ್ ಸಾಧನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ವಿತರಿಸಿದರು.
ಮಂಗಳವಾರ ಶಾಸಕರ ಕಚೇರಿಯಲ್ಲಿ ಬಂಟ್ವಾಳ ತಾಲೂಕಿನ ಮಾಣಿ, ಮಾಣಿಲ, ಮಣಿ ನಾಲ್ಕೂರು, ಇರ್ವತ್ತೂರು, ಸಜಿಪ ಮುನ್ನೂರು ಗ್ರಂಥಾಲಯಗಳಿಗೆ ಡೆಲ್ ಡೆಸ್ಕ್ ಟಾಪ್ ಕಂಪ್ಯೂಟರ್ ಹಾಗೂ ಮೊಬೈಲ್ ಫೋನ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸಚಿನ್ ಕುಮಾರ್, ಶಿಕ್ಷಣ ಫೌಂಡೇಶನ್ ನ ಜಿಲ್ಲಾ ಸಂಯೋಜಕಿ ಯಾಗಿರುವ ಸುಮತಿ, ಸಂಬಂಧಪಟ್ಟ ಪಂಚಾಯಿತ್ ಅಭಿವೃದ್ಧಿ ಅಧಿಕಾರಿಯವರು, ಗ್ರಂಥಾಲಯ ಮೇಲ್ವಿಚಾರಕರು, ಹಾಗೂ ತಾಲೂಕ ಪಂಚಾಯತಿ ವಿಷಯ ನಿರ್ವಾಹಕರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.