ಕೋಲಾರ: ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಕೋಲಾರ: ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶ್ರೀನಿವಾಸಪುರ ತಾಲೂಕಿನ ಬಟ್ಟುವಾರಪಲ್ಲಿ ತಿರುವಿನಲ್ಲಿ ನಡೆದಿದೆ. ಸೊಣ್ಣಕಲ್ಲು ಗ್ರಾಮದ ನರಸಿಂಹ(38) ಮೃತ ವ್ಯಕ್ತಿ ಎಂದು ಹೇಳಲಾಗಿದೆ. ಅರಣ್ಯ ಇಲಾಖೆಯಲ್ಲಿ ದಿನಕೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.