ಬಂಟ್ವಾಳ ತಾಲೂಕು ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ
ಬಂಟ್ವಾಳ: ದೇಶಪ್ರೇಮ, ಪರಾಕ್ರಮ, ಚಾಣಾಕ್ಷತೆಗಳಿಂದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಾಜಿ ಮಹಾರಾಜರು, ತಾಯಿ ಮತ್ತು ಗುರುಗಳ ಮಾರ್ಗದರ್ಶನದಿಂದ ಪರಾಕ್ರಮಿಯಾಗಿ ಬೆಳೆದು ಇಂದಿಗೂ ಜನಮಾನಸದಲ್ಲಿ ನೆಲೆನಿಂತ ಇವರ ಕಥಾನಕವು ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಬಂಟ್ವಾಳ ತಾಲೂಕು ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು ಹೇಳಿದರು.

ಬುಧವಾರ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನುದೀಪ ಬೆಳಗಿಸಿ ಉದ್ಘಾಟನೆಗೈದು ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ವಿಜಯ್ ಆರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.