ಮಹಿಳೆಯರಿಗೆ ಸ್ವ ಉದ್ಯೋಗ ತರಬೇತಿ ಶಿಬಿರ
ಬಂಟ್ವಾಳ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ(ರಿ) ಮಂಗಳೂರು, ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ದೀನ್ ದಯಾಳ್ ಅಂತ್ಯೋದಯ ಯೋಜನೆ,ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧ ಸಂಸ್ಥೆ,ದ.ಕ. ಜಿ. ಪಂ.,ತಾಲೂಕು ಪಂಚಾಯತ್ ಬಂಟ್ವಾಳ,ಪುದು ಗ್ರಾಮ ಪಂಚಾಯತ್ ಮಟ್ಟದ ಮನಸ್ವಿನಿ ಸಂಜೀವಿನಿ ಒಕ್ಕೂಟ ಇದರ ಆಶ್ರಯದಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ಒಂದು ದಿನದ ಸ್ವ ಉದ್ಯೋಗ ತರಬೇತಿ ಶಿಬಿರವು ಪುದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷರಾದ ವಿನಯ ತರಬೇತಿ ಶಿಬಿರವನ್ನು ಉದ್ಘಾಟಿಸಿದರು.ಪುದು ಗ್ರಾ. ಪಂ. ಅಧ್ಯಕ್ಷರಾದ ರಶೀದ ಬಾನು ಸಭಾಧ್ಯಕ್ಷತೆ ವಹಿಸಿದ್ದರು.ಅತಿಥಿಯಾಗಿ ಭಾಗವಹಿಸಿದ್ದ ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ನ ವ್ಯವಸ್ಥಾಪಕರಾದ ಜೀವನ ಕೊಲ್ಯ ಮಾತನಾಡಿಈ ತರಬೇತಿಯ ಸದುಪಯೋಗಪಡೆದು ಮಹಿಳೆಯರು ಸ್ವಉದ್ಯೋಗ ದಿಂದ ಸಬಲೀಕರಣದ ಕಡೆಗೆ ಸಾಗಬೇಕು ಎಂದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್, ಸಂಜೀವಿನಿ ಅಭಿಯಾನ ಘಟಕದ ವಲಯ ಮೇಲ್ವಿಚಾರಕಿ ಕುಸುಮ,ಬಿಆರ್ ಪಿ,ಇಪಿ ಕುಮಾರಿ ಹರ್ಷಿತ, ಸಂಪನ್ಮೂಲ ವ್ಯಕ್ತಿ ಸುಜಾತಾ ಉಪಸ್ಥಿತರಿದ್ದರು.ಇದೇ ವೇಳೆ ಫಲಾನುಭವಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು..
ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ಮಮತಾ ಅವರು ಸ್ವಾಗತಿಸಿದರು. ಮನಸ್ವಿನಿ ಸಂಜೀವಿನಿ ಒಕ್ಕೂಟದ ಮುಖ್ಯಪುಸ್ತಕ ಬರಹಗಾರರದ ರೇಷ್ಮಾ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.