ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ:ಬಿ ರಮಾನಾಥ ರೈ
ಪೊಳಲಿ:ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿ ಜನರ ಸೇವೆ ಮಾಡಿ ಅವರ ವಿಶ್ವಾಸ ಗಳಿಸುವ ಪಕ್ಷದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಅವರು ವಲಯ ಕಾಂಗ್ರೇಸ್ ಕರಿಯಂಗಳ ಅಭಿನಂದನಾ ಸಮಾರಂಭದಲ್ಲಿ ದ. ಕ. ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಕ್ರಷಿ ಪತ್ತಿನ ವ್ಯ.ಸೇ.ಸ. ಸಂಘದ ನಿರ್ದೇಶಕರಾದ ಲಕ್ಷ್ಮೀಶ್ ಶೆಟ್ಟಿ ಮತ್ತು ಗೋಡ್ ಪ್ರೀ ಫೆರ್ನಾಂಡಿಸ್ ಇವರನ್ನು ಅಭಿನಂದಿಸಿ ಮಾತನಾಡಿದರು.


ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್ ಅರ್ ಪೂಜಾರಿ ಹಾಗೂ ಮಾಜಿ ಜಿಲ್ಲಾ. ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಶುಭ ಹಾರೈಸಿದರು, ಫೆ. ೧೭ ರಂದು ಸೋಮವಾರ ಬಡಕಬೈಲ್ ಜಂಕ್ಷನ್‌ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಬೂಡ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಮಾಜಿ ತಾಲೂಕು ಉಪಾಧ್ಯಕ್ಷ ಅಬ್ಬಾಸ್ ಆಲಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ಪೂಜಾರಿ, ಕರಿಯಂಗಳ ಗ್ರಾಮ ಪಂ ಅಧ್ಯಕ್ಷೆ ರಾಧಾ ಲೋಕೇಶ್ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಜ್ವಲ್‌ಶೆಟ್ಟಿ, ದ.ಕ ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿ ಉಮೇಶ್ ಅಚಾರ್ಯ ಉಪಸ್ಥಿತರಿದ್ದರು. ಕರಿಯಂಗಳ ಕಾಂಗ್ರೇಸ್ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಸ್ವಾಗತಿಸಿ ಕರಿಯಂಗಳ ಗ್ರಾ. ಪಂ ಪಂಚಾಯತ್ ಉಪಾಧ್ಯಕ್ಷ ರಾಜುಕೋಟ್ಯಾನ್ ವಂದಿಸಿದರು. ಕಿಶೋರ್ ಭಂಡಾರಿ ನಿರೂಪಿಸಿದರು.