ಇನ್ನೂ ಮುಂದೆ ದೆಹಲಿಯಲ್ಲಿ ಮಹಿಳಾ ದರ್ಬಾರ್, ರೇಖಾ ಗುಪ್ತಾ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರೇಖಾ ಗುಪ್ತಾ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಹಾಗೇ, ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ ಗೆದ್ದ ಪರ್ವೇಶ್ ವರ್ಮಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಶ್ ಸೂದ್, ಜಿತೇಂದ್ರ ಮಹಾಜನ್, ರೇಖಾ ಗುಪ್ತಾ ಮುಂತಾದವರ ಹೆಸರು ಸಿಎಂ ರೇಸ್ನಲ್ಲಿ ಕಾಣಿಸಿಕೊಂಡಿತ್ತು. ಇದೀಗ ಕೊನೆಗೂ ದೆಹಲಿ ಮುಖ್ಯಮಂತ್ರಿಯನ್ನು ಘೋಷಣೆ ಮಾಡಿದೆ. ಇದಕ್ಕೂ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್ನ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಕ್ಷದ ಅತಿಶಿ ದೆಹಲಿಯ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು. 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ರೇಖಾ ಗುಪ್ತಾ (ಶಾಲಿಮಾರ್ ಬಾಗ್ ಶಾಸಕಿ) ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷೆಯೂ ಆಗಿದ್ದಾರೆ. 29,595 ಮತಗಳ ಅಂತರದಿಂದ ತಮ್ಮ ಸ್ಥಾನವನ್ನು ಗೆದ್ದಿದ್ದಾರೆ.
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.