ಮತ್ತೊಂದು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ

ಒಂದು ಮುಡಾ ಪ್ರಕರಣದಿಂದ ಬಚಾವ್ ಆಗಿರುವ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಮುಡಾ ಪ್ರಕರಣ ಸುತ್ತಿಕೊಂಡಿದೆ. ಮೈಸೂರಿನ ಕೆಸರೆ ಗ್ರಾಮದ ಜಮೀನಿಗೆ ಸಂಬಂಧಪಟ್ಟಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಹಗರಣದಿಂದ ಕ್ಲಿನ್ ಚೀಟ್ ಪಡೆದಿರುವ ಸಿಎಂಗೆ ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಎನ್ಆರ್ ರಮೇಶ್ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.
ವಿಜಯನಗರ ಎರಡನೇ ಹಂತದ ಬಡಾವಣೆ ನಿರ್ಮಾಣ ಮಾಡುವುದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೈಸೂರಿನ ಹಿಣಕಲ್ ಗ್ರಾಮದ ಸರ್ವೆ ನಂಬರ್ 70/4 ಎ ಜಾಗವನ್ನು ಸ್ವಾಧೀನಪಡಿಸಿಕೊಂಡಿತ್ತು. ಆ ಭೂಮಿಯನ್ನು ಡಿ ನೋಟಿಫಿಕೇಶನ್ ಮಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಉಲ್ಲಂಘಿಸಿದ್ದಾರೆ. ಅಲ್ಲದೆ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.