ಬಂಟ್ವಾಳ: ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಧಕ್ಷಿಣ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಾಳ್ತಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ವತಿಯಿಂದ ಮೂಲಭೂತ ಸಾಕ್ಷಾರತ ಮತ್ತು ಸಂಖ್ಯಾ ಜ್ಞಾನದ ಕಲಿಕಾ ಹಬ್ಬ- 2025 ಕಾರ್ಯಕ್ರಮ ನಡೆಯಿತು.

ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಂಜಿನಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.ಬಾಳ್ತಿಲ ಕ್ಲಸ್ಟರ್ನ 9 ಶಾಲೆಗಳ ಸುಮಾರು ಸುಮಾರು 114 ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಉಷಾ, ನರಿಕಂಬು ಶಾಲಾ ಮುಖ್ಯ ಶಿಕ್ಷಕಿ ಸುಜಾತ, ಬಾಳ್ತಿಲ ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ, ಶಂಭೂರು ಶಾಲಾ ಮುಖ್ಯ ಶಿಕ್ಷಕ ಜಯರಾಮ್, ಶಾಲಾ ನಾಯಕ ಜೀವನ್, ಶಾಲಾ ನಾಯಕಿ ಸಿಂಚನ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿ, ಶಿಕ್ಷಕಿ ಮಮತಾ ಶೆಟ್ಟಿ ವಂದಿಸಿದರು, ಶಿಕ್ಷಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರದ ಸುಮಿತ್ರ, ವಿಶಾಲಾಕ್ಷಿ, ಅಮಿತಾ ಸಹಕರಿಸಿದರು.

By suddi9

Leave a Reply

Your email address will not be published. Required fields are marked *