ರಾಜ್ಯ ಸರ್ಕಾರದ ಮಹತ್ವದ ಮೂರು ಮಸೂದೆಗಳಿಗೆ ಸಹಿ ಹಾಕದೇ ವಾಪಸ್ಸು ಕಳಿಸಿದ ರಾಜ್ಯಪಾಲ

ರಾಜ್ಯ ಸರ್ಕಾರ ಮಹತ್ವದ ಮೂರು ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕದೇ ವಾಪಸ್ಸು ಕಳಿಸಿದ್ದಾರೆ. ಇದೀಗ ಮತ್ತೆ ರಾಕ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ ಸಹಿ ಹಾಕಿಲ್ಲ. ಈ ತಿದ್ದುಪಡಿಯು ದಾರಿ ತಪ್ಪಿಸುವಂತಿದೆ. ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದಿದ್ದಾರೆ.
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರಿಗೆ ಮುಖ್ಯಮಂತ್ರಿ ಇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.
ವಾಪಸ್ ಕಳುಹಿಸಿ ಇತರ ಎರಡು ಮಸೂದೆಗಳೆಂದರೆ ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.