Published On: Mon, Feb 24th, 2025

ಪುತ್ತೂರಿನ ಖಾಸಗಿ ಆಸ್ಪತ್ರೆ ಒಂದು ಎಡವಟ್ಟು, ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮಾಡಿ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು!

ಪುತ್ತೂರು: ಪುತ್ತೂರಿನ ಖಾಸಗಿ ಆಸ್ಪತ್ರೆ ಒಂದು ಎಡವಟ್ಟು ಮಾಡಿದೆ. ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿ 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡಿದ್ದಾರೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕದ ಶರಣ್ಯ ಲಕ್ಷ್ಮೀ ಎಂಬವರು ಹೆರಿಗೆಗಾಗಿ 2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿ, ಡಿಸೆಂಬರ್ 2 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಡಿಸ್ಚಾರ್ಜ್ ಆದ ಬಳಿಕ ಮಹಿಳೆಗ ವಿಪರೀತ ಜ್ವರದಿಂದ ಬಳಲಿದ್ದರು. ಈ ಬಗ್ಗೆ ಮಹಿಳೆಯ ಕುಟುಂಬದವರು ಹೆರಿಗೆ ಮಾಡಿಸಿದ ವೈದ್ಯ ಡಾ ಅನಿಲ್ ಬಳಿ ವಿಚಾರಿಸಿದ್ದರು.

ಜ್ವರದ ಔಷಧಿ ನೀಡುವಂತೆ ವೈದ್ಯರು ಸೂಚಿಸಿದ್ದರು. ಅದರೂ ಜ್ವರ ಕಡಿಮೆ ಆಗದಿದ್ದಾಗ ಮನೆಯವರು ಮತ್ತೆ ವೈದ್ಯರನ್ನು ಸಂಪರ್ಕಿಸಿದ್ದಾರೆ. ಈ ವೇಳೆ, ಹೆಮಟೋಮ್ ಆಗಿರಬಹುದು ಎಂದು ಹೇಳಿದ ವೈದ್ಯರು, ಹೆಚ್ಚು ಚಿಂತೆ ಮಾಡುವ ಅಗತ್ಯವಿಲ್ಲ ಕಡಿಮೆಯಾಗುತ್ತದೆ ಎಂದು ಭರವಸೆ ನೀಡಿದ್ದರು. ಅದಾದ ನಂತರ ಬಾಣಂತಿಯ ಸಮಸ್ಯೆ ಕಡಿಮೆಯೇ ಆಗದಿರುವುದರಿಂದ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಮಾಡಿಸಲಾಗಿದೆ. ಇದೇ ವೇಳೆ ಹತ್ತು ಸೆಂಟಿಮೀಟರ್ ಮಾಫ್ ಫಾರ್ಮೇಶನ್ ಆಗಿರುವುದು ಪತ್ತೆಯಾಗಿದೆ. ಬಳಿಕ ಬೇರೆ ಔಷಧಿ ನೀಡಿದ ನಂತರ ಜ್ವರ ಕಡಿಮೆಯಾಗಿತ್ತು. ಆದರೆ ನಂತರ ಸಂಧಿ ನೋವು ಕಾಡಿತ್ತು. ಇದಕ್ಕೆ ಆರ್ಥೋ ಸಮಸ್ಯೆ ಇರಬಹುದು ಎಂದು ವೈದ್ಯ ಅನಿಲ್ ಹೇಳಿದ್ದರು.

ಬಾಣಂತಿಯ ಕುಟುಂಬದವರು ಮಂಗಳೂರಿನ ವೈದ್ಯರನ್ನು ಸಂಪರ್ಕಿಸಿದ್ದರು. ಅಲ್ಲಿ ಸ್ಕ್ಯಾನಿಂಗ್ ರಿಪೋರ್ಟ್ ನೋಡಿದ ವೈದ್ಯರಿಗೆ, ಮಾರ್ಚ್ ಫಾರ್ಮೇಶನ್ ಆಗಿರುವುದು ಕಂಡುಬಂದಿದ್ದು, ಪುತ್ತೂರಿನ ವೈದ್ಯರ ಬಳಿ ಪ್ರಶ್ನಿಸಿದ್ದರು. ನಂತರ ಸಿಟಿ ಸ್ಕ್ಯಾನ್ ಮಾಡಿದಾಗ ವರದಿಯಲ್ಲಿ ಹೊಟ್ಟೆ ಒಳಗಡೆ ಸರ್ಜಿಕಲ್ ಬಟ್ಟೆ ಬಿಟ್ಟಿರುವ ವಿಚಾರ ತಿಳಿದುಬಂದಿದೆ. ಅಷ್ಟರಲ್ಲಾಗಲೇ ಸಿಸೇರಿಯನ್ನಾಗಿ ಒಂದುವರೆ ತಿಂಗಳಾಗಿದ್ದರಿಂದ ಬಾಣಂತಿ ಆರೋಗ್ಯ ಸಮಸ್ಯೆ ತೀರಾ ಹದಗೆಟ್ಟಿದ್ದು, ಅಪಾಯದ ಸ್ಥಿತಿ ತಲುಪಿತ್ತು. ನಂತರ ಪುತ್ತೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನೆರವೇರಿಸಿ ಸರ್ಜಿಕಲ್ ಬಟ್ಟೆಯ ಮುದ್ದೆಯನ್ನು ವೈದ್ಯರು ಹೊರತೆಗೆದಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter