ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಬೆಳಗಾವಿಯ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಗೋಕಾಕ್​ನಿಂದ ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗ್‌ರಾಜ್​ನ ಕುಂಭಮೇಳಕ್ಕೆ ತೆರಳುತ್ತಿದ್ದರು ಇಂದು (ಫೆ.24) ಬೆಳಗಿನ ಜಾವ ಕ್ರೂಸರ್​ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್​ಗೆ ಡಿಕ್ಕಿ ಹೊಡೆದಿದೆ.

By suddi9

Leave a Reply

Your email address will not be published. Required fields are marked *