ವಿಜಯಪುರ: 24 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಮಹಾಕುಂಭಮೇಳದಲ್ಲಿ ಪತ್ತೆ

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ರಮೇಶ ಚೌಧರಿ ಕಳೆದ 2001 ರಲ್ಲಿ ಮನೆಯಿಂದ ನಾಪತ್ತೆಯಾಗಿದ್ದು, ಇದೀಗ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಾದಲ್ಲಿ ಪತ್ತೆಯಾಗಿದ್ದಾರೆ. 24 ವರ್ಷಗಳಿಂದ ನಾಪತ್ತೆಯಾಗಿದ್ದ ರಮೇಶ ಚೌಧರಿ ಕುಂಭಮೇಳಕ್ಕೆ ತೆರಳಿದ್ದವರಿಗೆ ಕಾಶಿಯಲ್ಲಿ ಸಿಕ್ಕಿದ್ದಾರೆ. ಇನ್ನು ರಮೇಶನನ್ನು ತಮ್ಮ ವಾಹನದಲ್ಲಿ ವಾಪಸ್ ಬಳೂತಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾರೆ. ಸುಮಾರು 24 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಮೇಶ ಚೌಧರಿ ಬಳೂತಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಆತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.