ದಕ್ಷಿಣ ಕನ್ನಡದ ಜನರೇ ಒಮ್ಮೆ ಇಲ್ಲಿ ಗಮನಿಸಿ, ಉಷ್ಣ ಅಲೆಯ ಎಚ್ಚರಿಕೆ, ಹೊರಗೆ ಹೋಗುವಾಗ ಈ ಮಾರ್ಗಸೂಚಿ ಪಾಲಿಸಿ

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಈ ಸಮಯದಲ್ಲಿ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಇಲ್ಲಿ ತಿಳಿಸಿದ್ದಾರೆ. ಜಿಲ್ಲಾಡಳಿತಗಳು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬಿಸಿ ಗಾಳಿಯ ಆಘಾತದಿಂದ ಪಾರಾಗಲು ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.
ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.
ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
ಹಗುರವಾದ ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
ರಕ್ಷಣಾತ್ಮಕ ಕನ್ನಡಕಗಳು ಛತ್ರಿ/ಟೋಪಿ ಬೂಟುಗಳು ಅಥವಾ ಚಪ್ಪಲ್ಗಳನ್ನು ಬಳಸಿ.
ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ. ತಲೆ ಕುತ್ತಿಗೆ ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ.
ಲಸ್ಸಿ ನಿಂಬೆ ನೀರು ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹದಲ್ಲಿ ನೀರಿನ ಅಂಶ ಹೆಚ್ಚು ಮಾಡಲು ಮತ್ತು ಡಿಹೈಡ್ರೇಷನ್ ತಡೆಯಲು ಸಹಾಯ ಮಾಡುತ್ತದೆ.
ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
ಪರದೆಗಳು ಕಟರ್‌ಗಳು ಅಥವಾ ಸೆನ್‌ಶೇಡ್ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.