ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಪರೀಕ್ಷೆ ಬರೆಯಲಿರುವ 7 ಲಕ್ಷ ವಿದ್ಯಾರ್ಥಿಗಳು

2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ ನಡೆಯಲಿದೆ. 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಅಳವಡಿಸಲಾಗಿದೆ ಮತ್ತು ಮೊಬೈಲ್, ಕ್ಯಾಲ್ಕುಲೇಟರ್‌ಗಳು ನಿಷೇಧಿಸಲಾಗಿದೆ.
ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.ಎಲ್ಲ ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಪರೀಕ್ಷಾ ಕೊಠಡಿಯೊಳಗೆ ಮೊಬೈಲ್, ಎಲೆಕ್ಟ್ರಾನಿಕ್ ವಾಚ್, ಕ್ಯಾಲುಕೇಟರ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಾಲಾಗಿದೆ. ಜೆರಾಕ್ಸ್ ಅಂಗಡಿಗಳಿಗೆ ನಿರ್ಬಂಧಿಸಲಾಗಿದೆ. ಮತ್ತು ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.