ಚಾಮರಾಜನಗರ: ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ, ಐದು ಮಂದಿ ಸಾವು

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಂಡ್ಯ ಮೂಲದ ಐದು ಮಂದಿ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಪಕ್ಕಕ್ಕೆ ಉರುಳಿಬಿದ್ದಿದೆ. ಪೊಲೀಸರು ಅಪಘಾತದ ತನಿಖೆ ನಡೆಸುತ್ತಿದ್ದಾರೆ.
ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.