ಸಿದ್ದರಾಮಯ್ಯ ತಮ್ಮ 16ನೆ ಬಜೆಟ್​​ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ. ಇದೇ ವೇಳೆ ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್​​ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *