ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಸಹಾಯ ಧನ ಹೆಚ್ಚಳ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಾಸಿಕ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಮಾಸಿಕ ಗೌರವಧನ 750 ರೂ,ಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.