ಮೂಡುಬಿದ್ರಿ: ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಶಿರ್ತಾಡಿ – ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ. ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಸುಜಯ ಭಂಡಾರಿ (35)ಶುಕ್ರವಾರ ಸಂಜೆ ವೇಳೆಗೆ ತನ್ನ ಕರ್ತವ್ಯ ಮುಗಿಸಿ ಮೂಡಬಿದಿರೆ ನಾಗರಕಟ್ಟೆಯಲ್ಲಿರುವ ಮನೆಗೆ ಆಕ್ವಿವಾದಲ್ಲಿ ಹೋಗುತ್ತಿದ್ದರು. ಶಿರ್ತಾಡಿ ಸೇತುವೆ ಬಳಿ ಎದುರುಗಡೆಯಿಂದ ಅತೀ ವೇಗವಾಗಿ ಬಂದ ಕಾರು ಏಕಾಏಕಿಯಾಗಿ ಆಕ್ವಿವಾಕ್ಕೆ ಡಿಕ್ಕಿ ಹೊಡೆದಿತ್ತು. ಕಾರು ಬಂದು ಡಿಕ್ಕಿ ಹೊಡೆದ ರಭಸಕ್ಕೆ ಸುಜಯ ಭಂಡಾರಿ ಬಹಳ ದೂರಕ್ಕೆ ಹೋಗಿ ಬಿದ್ದಿದ್ದಾರೆ. ಇದರ ಪರಿಣಾಮ ಅವರ ಪ್ರಾಣ ಪಕ್ಷಿ ಹೋಗಿದೆ. ತಲೆಭಾಗಕ್ಕೆ ತೀವ್ರ ಗಾಯಗೊಂಡಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಕೊನೆಯುಸಿರೆಳೆದಿದ್ದಾರೆ.

By Suddi9

Leave a Reply

Your email address will not be published. Required fields are marked *