ಉಡುಪಿ ಡಿ ಮಾರ್ಟ್​​ನಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್ ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್ ಸಿಕ್ಕಿಬಿದ್ದಿದ್ದಾನೆ. ದಿಗಂತ ಚಲನವಲನ ಕಂಡು ಸಂಶಯಗೊಂಡ ಸಿಬ್ಬಂದಿ
ವಿಚಾರಣೆ ನಡೆಸುವಾಗ ತಾನು ದಿಗಂತ್ ಎಂದು ಹೇಳಿಕೊಂಡಿದ್ದಾನೆ. ನಂತರ ಪೊಲೀಸರಿಗೆ ಹೇಳಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ದಿಗಂತ್​​ನ್ನು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ.

13 ದಿನದ ಬಳಿಕ ನಾಪತ್ತೆಯಾದ ದಿಗಂತ್ ಸುಳಿವು ಸಿಕ್ಕಿದೆ. ಬಂಟ್ವಾಳದಿಂದ ನಾಪತ್ತೆಯಾದ ದಿಗಂತ್ ಪತ್ತೆಯಾಗಿದ್ದಾನೆ. ಇದೀಗ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಮನೆಗೆ ಬಂದಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು. ಇಷ್ಟು ದಿನವಾದರೂ ಪೋಲಿಸರು ಯಾವುದು ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆರೋಪ ಕೂಡ ವ್ಯಕ್ತವಾಗಿತ್ತು. ಈ ಬಗ್ಗೆ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು ಕೂಡ ನಡೆಸಿದ್ದರು. ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ.

By suddi9

Leave a Reply

Your email address will not be published. Required fields are marked *