ಬಂಟ್ವಾಳ: ದಿಗಂತ್ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಭಜರಂಗದಳ ಮುಖಂಡ ಭರತ್ ಕುಮ್ಡೇಲ್ಗೆ ಕೊಲೆ ಬೆದರಿಕೆ

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದು. ಇದೀಗ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್ಗಳ ಮುಖಾಂತರ ಕೊಲೆ ಬೆದರಿಕೆ ಹಾಕಲಾಗಿದೆ.
ದಿಗಂತ್ ಪತ್ತೆಗಾಗಿ ಮಾರ್ಚ್ 1ರಂದು ಭಜರಂಗದಳ ಮುಖಂಡ ಭರತ್ ನೇತೃತ್ವದಲ್ಲಿ ಫರಂಗೀಪೇಟೆ ಬಂದ್ ನಡೆಸಲಾಗಿತ್ತು. ದಿಗಂತ್ ನಾಪತ್ತೆ ಹಿಂದೆ ಅನ್ಯಮತೀಯರ ಹಾಗೂ ಗಾಂಜಾ ಗ್ಯಾಂಗ್ ಕೈವಾಡ ಎಂದು ಪ್ರತಿಭಟನೆ ವೇಳೆ ಭರತ್ ಕುಮ್ಡೇಲು ಆರೋಪಿಸಿದ್ದರು.ಇದೀಗ, ವಿದ್ಯಾರ್ಥಿ ದಿಗಂತ್ ಪತ್ತೆಯಾದ ಬೆನ್ನಲ್ಲೇ ಸಾಮಾಜಿ ಜಾಲತಾಣದಲ್ಲಿ ಕಿಡಿಗೇಡಿಗಳು ಭರತ್ ಕುಮ್ಡೇಲುಗೆ ಬೆದರಿಕೆ ಹಾಕಿದ್ದಾರೆ.