ಪೊಲೀಸ್ ಅಧಿಕಾರಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ

ಇನ್ನು ಮುಂದೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ ಪರಮೇಶ್ವರ್ ಉತ್ತರ ನೀಡಿದ್ದಾರೆ.