ದಿಗಂತ್ ನಾಪತ್ತೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಮನೆಗೆ ಹೋಗಲು ಒಪ್ಪುತ್ತಿಲ್ಲ ದಿಗಂತ್

ಬಂಟ್ವಾಳ: ಪರೀಕ್ಷೆ ಹೆದರಿ ಮನೆ ಬಿಟ್ಟು ಹೋಗಿದ್ದ ದಿಗಂತ್ ಈಗ ಮನೆಗೆ ಹೋಗಲು ಒಪ್ಪುತ್ತಿಲ್ಲ. ಬಂಟ್ವಾಳ ಪೊಲೀಸರು ಇಂದು ಹೈಕೋರ್ಟ್ ಗೆ ಅಫಿದವಿತ್ ಸಲ್ಲಿಸಿದ್ದಾರೆ. ಬಂಟ್ವಾಳ ಫರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಪಡೆಯುತ್ತಿದೆ. ಇಂದು ಹೈ ಕೋರ್ಟ್ ನಲ್ಲಿ ನಡೆದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಲಾಗಿತ್ತು. ಅಫಿದವಿತ್ ನಲ್ಲಿ ದಿಗಂತ್ ಪತ್ತೆಯಾದ ಬಗ್ಗೆ ಹಾಗೂ ದಿಗಂತ್ ಹೇಳಿಕೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ.
ಈ ವಿಚಾರಣೆ ವೇಳೆ ಪೊಲೀಸರ ಪರ ವಕೀಲರು ಆತ ಮನೆಗೆ ಹೋಗಲು ಒಪ್ಪುತ್ತಿಲ್ಲ ಎಂಬ ವಿಚಾರವನ್ನು ಹೈ ಕೋರ್ಟ್ ಗಮನಕ್ಕೆ ತಂದಿದ್ದಾರೆ. ಅಫಿದವಿತ್ ನಲ್ಲೂ ದಿಗಂತ್ ಪೋಷಕರ ಬಳಿ ಹೋಗಲು ನಿರಾಕರಿಸುತ್ತಿರುವ ಬಗ್ಗೆ ಉಲ್ಲೇಖಯಾಗಿದೆ. ಇದೆ ವೇಳೆ ಮಗನನ್ನು ಕಳುಹಿಸಿ ಕೊಡುವಂತೆ ದಿಗಂತ್ ಫೋಷಕರಿಂದ ಹೈ ಕೋರ್ಟ್ ಗೆ ಮನವಿ ಮಾಡಿದ್ದಾರೆ. ದಿಗಂತ್ ಪತ್ತೆಯಾದ ದಿನ ಫೋನ್ ನಲ್ಲಿ ತಾಯಿ ಜೊತೆ ಮಾತನಾಡಿದ ವಿವರವನ್ನು ಪೋಷಕರ ಪರ ವಕೀಲರು ಉಲ್ಲೇಖಿಸಿದ್ದಾರೆ.
ದಿಗಂತ್ ಪೋಷಕರ ಪರ ವಕೀಲ ನಾನಾಗಿಯೇ ಹೋಗಿಲ್ಲ ನನ್ನನ್ನ ಯಾರೋ ಕರೆದು ಕೊಂಡು ಹೋಗಿದ್ದಾರೆ ಎಂದಿದ್ದನ್ನ ಕೋರ್ಟ್ ಮುಂದೆ ಪ್ರಸ್ತಾಪಿಸಿದ್ದಾರೆ. ಆದರೆ ದಿಗಂತ್ ಅವನಾಗಿಯೇ ಹೋಗಿರುವುದಾಗಿ ಪೊಲೀಸರು ಅಫಿದವಿತ್ ಸಲ್ಲಿಸಿದ್ದಾರೆ. ಅವನು ಯಾವುದೇ ಅನಧಿಕೃತ ಬಂಧನಕ್ಕೆ ಒಳಗಾಗಿರಲಿಲ್ಲ ಎಂದು ಪೊಲೀಸರಿಂದ ಕೋರ್ಟ್ ಗೆ ವರದಿಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆ ಭಯದಿಂದ ತಾನಾಗಿಯೇ ಹೋಗಿದ್ದಾಗಿ ವಿಚಾರಣೆ ವೇಳೆ ದಿಗಂತ್ ತಿಳಿಸಿದ್ದಾಗಿ ಪೊಲೀಸರಿಂದ ವರದಿ ಮಾಡಿದ್ದಾರೆ. ಪಿಯುಸಿ ಪರೀಕ್ಷೆ ಇನ್ನೂ ಮುಗಿಯದ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೋಷಕರ ಮನವಿ ಮಾಡಿದ್ದಾರೆ. ಈ ವೇಳೆ ಪರೀಕ್ಷೆ ವಿಚಾರವನ್ನ ಗಂಭೀರವಾಗಿ ತೆಗೆದುಕೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಪರೀಕ್ಷೆ ವಿಚಾರದಲ್ಲಿ ವಿದ್ಯಾರ್ಥಿಗೆ ಯಾಕೆ ಒತ್ತಡ ಹೇರುತ್ತೀರಿ ಎಂದು ಹೈ ಕೋರ್ಟ್ ಪ್ರಶ್ನೆ ಮಾಡಿದೆ. ವಿದ್ಯಾರ್ಥಿ ದಿಗಂತ್ ಜೊತೆ ಮಾತನಾಡಲು ಅವಕಾಶ ಕೊಡುವಂತೆ ಹೈ ಕೋರ್ಟ್ ಗೆ ದಿಗಂತ್ ಪೋಷಕರ ಮನವಿ ಮಾಡಿದ್ದಾರೆ. ದಿಗಂತ್ ವಿಚಾರದಲ್ಲಿ ಮಕ್ಕಳ ಕಲ್ಯಾಣ ಸಮಿತಿ ನಿರ್ಧಾರ ಕೈಗೊಳ್ಳಲು ಹೈ ಕೋರ್ಟ್ ಸೂಚನೆ ನೀಡಿದೆ. ಸದ್ಯಕ್ಕೆ ದಿಗಂತ್ ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿ ವಶದಲ್ಲಿ ಇದ್ದಾನೆ.