ಮೀನು ತಿನ್ನುವವರಿಗೂ ಶಾಕ್: ಮೀನಿನ ಬೆಲೆ ಶೇ 30 ಏರಿಕೆ

ಬೆಂಗಳೂರಿನಲ್ಲಿ ಮೀನಿನ ಬೆಲೆಯಲ್ಲಿ ಶೇಕಡಾ 30 ರಷ್ಟು ಏರಿಕೆಯಾಗಿದೆ. ಎಲ್ಲಾ ರೀತಿಯ ಸಮುದ್ರ ಮೀನುಗಳ ದರದಲ್ಲಿ ವ್ಯತ್ಯಾಸ ಆಗಿದೆ. ಬೇಡಿಕೆಗೆ ತಕ್ಕಷ್ಟು ಮೀನು ಪೂರೈಕೆ ಆಗದ ಹಿನ್ನೆಲೆ ಬೆಲೆಗಳು ಹೆಚ್ಚಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಹಕ್ಕಿ ಜ್ವರದ ಕಾರಣ ಕೋಳಿ ಮಾಂಸ ಸಿಗುತ್ತಿಲ್ಲ. ಸಿಕ್ಕಿದರೂ ಅನೇಕರು ರೋಗ ಭೀತಿಯಿಂದ ಅದನ್ನು ಖರೀದಿ ಮಾಡುತ್ತಿಲ್ಲ. ಮತ್ತೊಂದೆಡೆ, ಮಟನ್ ದುಬಾರಿಯಾಗಿದೆ. ಈ ಎಲ್ಲ ಕಾರಣಗಳಿಂದ ಮೀನಿನ ಬೇಡಿಕೆ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ ಮೀನು ಬೆಲೆ ಕೂಡ ದುಬಾರಿಯಾಗಿದೆ.
ಅಂಜಲ್ 650 – 850
ಬಂಗುಡೆ 200 – 250
ಶಿಲಾ 350 – 400
ವೈಟ್ ಪಂಪ್ಲೆಟ್ 900 – 1200
ಬ್ಲಾಕ್ ಪಂಪ್ಲೇಟ್ 600 – 850
ಪ್ರಾನ್ಸ್ 380 – 450
ಕ್ರಾಬ್ 180 – 300
ಶಂಕರ 250 – 320
ತುನ 200 – 300
ಪಾರೆ 200 – 250