ಮಂಗಳೂರು: ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್ ಮೇಲೆ ನೇತಾಡಿದ ಮಹಿಳೆ

ಮಂಗಳೂರು ನಗರದಲ್ಲಿ ಬೈಕ್ ಸವಾರನಿಗೆ ಗುದ್ದುವ ಬದಲು ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್ ಮೇಲೆ ನೇತಾಡಿರುವ ವಿಡಿಯೋ ವೈರಲ್ ಆಗಿದೆ.
ಮುರಳಿ ಪ್ರಸಾದ್ ಎನ್ನುವಾತ ಬೈಕ್ ಮೇಲೆ ತೆರಳತ್ತಿದ್ದು, ಈತನಿಗೆ ಗುದ್ದಿ ಹತ್ಯೆ ಮಾಡುವ ಪ್ಲ್ಯಾನ್ ಇತ್ತು. ಆದ್ರೆ, ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಕಾರು ಗುದ್ದಿದೆ. ಪರಿಣಾಮ ಮಹಿಳೆ ಕಾಂಪೌಂಡ್ ಮೇಲೆ ಬಿದ್ದು ನೇತಾಡಿದ್ದಾಳೆ. ಬಳಿಕ ಸ್ಥಳೀಯರು ಓಡೋಡಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಕಾರು ಚಾಲಕ ಸತೀಶ್ ಕುಮಾರ್ ಈ ಕೃತ್ಯ ಎಸಗಿದ್ದಾನೆ. ಅದೃಷ್ಟವಶಾತ್ ಮಹಿಳೆ ಬದುಕಿದ್ದಾಳೆ.