ರಾಜ್ಯದ ಜನರಿಗೆ ಶಾಕ್ ನೀಡಲಿದೆ ಕಾಂಗ್ರೆಸ್ ಸರ್ಕಾರ, ಹಾಲಿನ ದರ ಹೆಚ್ಚಳ ಸಾಧ್ಯತೆ?

ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲಿದೆ. ಹೌದು ಸರ್ಕಾರ ಮತ್ತೆ ಹಾಲಿನ ದರ ಹೆಚ್ಚಿಸಲು ಮುಂದಾಗಿದೆ. ಈ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಫ್ ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ವಿಚಾರವಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯೂ ಇದೆ.
ಪಶು ಆಹಾರ, ಮೇವು, ಕೂಲಿ ಹಾಗೂ ಇತರ ಖರ್ಚು ವಚ್ಚಗಳು ಹೆಚ್ಚಾಗಿದೆ. ಹೀಗಾಗಿ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿಯಂತೆ ಹೆಚ್ಚಳ ಮಾಡಬೇಕು ಎಂದು ಕರ್ನಾಟಕದ ಎಲ್ಲ ಹಾಲು ಒಕ್ಕೂಟಗಳ ಅಧ್ಯಕ್ಷರು ಪಶುಸಂಗೋಪನೆ ಸಚಿವ ವೆಂಕಟೇಶ್‌ಗೆ ಮನವಿ ಮಾಡಿದ್ದರು. ಹೀಗಾಗಿ ಹಾಲಿನ ದರ ಹೆಚ್ಚಳ ಪ್ರಸ್ತಾವ ಸಿದ್ಧಪಡಿಸಲಾಗಿತ್ತು. ಆದರೆ, ಈ ಪ್ರಸ್ತಾವನೆಗೆ ಸರ್ಕಾರದಿಂದ ಅನುಮತಿ ದೊರೆಯಬೇಕಿದೆ ಎನ್ನಲಾಗಿದೆ.