ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್​ ಸೈಲೆಂಟ್​ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

By suddi9

Leave a Reply

Your email address will not be published. Required fields are marked *