ಮಂಗಳೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಿದ್ದಾರೆ. ಮಂಗಳೂರಿನ ಕಂಕನಾಡಿ ಮಾರ್ಕೆಟ್ ಬಳಿ ಗೋಮಾಂಸ ಪತ್ತೆಯಾಗಿದೆ. ಮಾಹಿತಿ ಮೇರೆಗೆ ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾರೆ.ಗೋಣಿ ಚೀಲದಲ್ಲಿ ತುಂಬಿದ್ದ 30ಕೆ.ಜಿ ಗೂ ಅಧಿಕ ಗೋಮಾಂಸ ಪತ್ತೆಯಾಗಿದೆ.
ಮಂಗಳೂರಿನ ಬಂದರು ಪ್ರದೇಶದಿಂದ ಗೋಮಾಂಸ ತಂದಿರುವ ಬಗ್ಗೆ ಮಾಹಿತಿ ಬಂದಿದೆ. ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರ ಭೇಟಿ ನೀಡಿದ್ದು,
ಗೋಮಾಂಸ ಸಹಿತ ದ್ವಿಚಕ್ರ ವಾಹನ ವಶಕ್ಕೆ ಪಡೆದ ಪೊಲೀಸರು. ಸರ್ಕಾರ, ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹ ಮಾಡಲಾಗಿದೆ. ಗೋಮಾಂಸ ಮಾಫಿಯಾ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತೆ ಎಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ ಹೇಳಿದ್ದಾರೆ.