ವಿಟ್ಲ: ಬಿಜೆಪಿ ಮುಖಂಡ ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ

ಮಂಗಳೂರು: ಬಿಜೆಪಿ ಮುಖಂಡ ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅರೋಪ
ಪ್ರಕರಣ ದಾಖಲಾಗುತ್ತಿದ್ದಂತೆ ಅರೋಪಿ ಮಹೇಶ್ ಭಟ್ ಪರಾರಿಯಾಗಿದ್ದಾರೆ. ಇದೀಗ ಮಹೇಶ್ ಭಟ್ ಬಂಧನಕ್ಕೆ ದಲಿತ ಸಂಘಟನೆಗಳ ಒತ್ತಾಯ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಬಿಜೆಪಿ ಮುಖಂಡ ಮಹೇಶ್ ಭಟ್ ವಿರುದ್ದ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ಮುಖಂಡ, ಪೆರುವಾಯಿ ಸಹಕಾರಿ ಸಂಘದಲ್ಲಿ ನಿರ್ದೇಶಕ ಮಹೇಶ್ ಭಟ್ ಎಂದು ಹೇಳಲಾಗಿದೆ. 16 ವರ್ಷದ ಬಾಲಕಿಯ ಜೊತೆ ಅನುಚಿತ ವರ್ತನೆ, ಕೀಳು ಮಟ್ಟದ ಶಬ್ದಗಳನ್ನು ಬಳಸಿದ್ದಾರೆ ಎಂದು ಹೇಳಲಾಗಿದೆ. ಬಾಲಕಿಯ ಪೋಷಕರು ವಿಟ್ಲದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.ಇದೀಗ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ದಲಿತ ದೌರ್ಜನ್ಯ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.