ಕರ್ನಾಟಕ ಜನರಿಗೆ ವಿದ್ಯುತ್ ಶಾಕ್ ನೀಡಿದ ಸಿದ್ಧರಾಮಯ್ಯ ಸರ್ಕಾರ, ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ

ಮಾಚ್ 27ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಇದೀಗ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಜನರಿಗೆ ವಿದ್ಯುತ್ ಶಾಕ್ ಕೊಟ್ಟಿದೆ.ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. ಪರಿಷ್ಕೃತ ವಿದ್ಯುತ್ ದರ ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ. ಮುಂದಿನ ಮೂರು ವರ್ಷಗಳಿಗೆ ದರ ಏರಿಕೆ ಮಾಡಿ ಪಟ್ಟಿ ಆದೇಶಿಸಿದೆ.
ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಎಸ್ಕಾಂಗಳು ಕೆಇಆರ್‌ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹೀಗಾಗಿ ಇಂದು (ಮಾರ್ಚ್ 27) ಕೆಇಆರ್‌ಸಿ ಅಧಿಕೃತವಾಗಿ ಪ್ರತಿ ಯೂನಿಟ್ ವಿದ್ಯುತ್ಗೆ 36 ಪೈಸೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ದರ ಜಾರಿಯಾಗಲಿದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.