ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ಸಲ್ಲಿಸಿದ ಸ್ಪೀಕರ್ ಯುಟಿ ಖಾದರ್

ಇದು ದೇಶದ್ಯಾಂತ ರಂಜಾನ್ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಮಂಗಳೂರಿನಲ್ಲೂ ಕೂಡ ರಂಜಾನ್ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಜಿಲ್ಲೆಯ ಅನೇಕ ಮಸೀದಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಪ್ರಾರ್ಥನೆ, ನಮಾಜ್ ಸಲ್ಲಿಸುತ್ತಿದ್ದಾರೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ಮಾಡಿದ್ದಾರೆ. ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಮುಸ್ಲಿಮರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.