ಜನರಿಗೆ ಇಂದಿನಿಂದ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಸಾಲು ಸಾಲು ಬೆಲೆ ಏರಿಕೆಯಿಂದ ಕರ್ನಾಟಕದ ಜನರಿಗೆ ತೊಂದರೆ ಉಂಟು ಮಾಡುವುದು ಖಂಡಿತ. ಹಾಲು, ಮೊಸರು, ವಿದ್ಯುತ್, ಟೋಲ್, ಮುದ್ರಾಂಕ ಶುಲ್ಕ ಸೇರಿ ಅನೇಕ ವಸ್ತುಗಳು ಅಥವಾ ಸೇವೆಗಳ ದರ ಏರಿಕೆ ಜಾರಿಗೆ ಬಂದಿದೆ. ಮತ್ತೊಂದೆಡೆ, ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ.

1.ಇಂದಿನಿಂದ ನಂದಿನಿ ಹಾಲಿನ ಎಲ್ಲಾ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆಯಾಗಿದೆ.

  1. ಮೊಸರಿನ ದರವೂ ಪ್ರತಿ ಲೀಟರ್​​ಗೆ 4 ರೂಪಾಯಿ ಏರಿಕೆಯಾಗಿದೆ.

3.ಪ್ರತಿಯೂನಿಟ್​ಗೆ 36 ಪೈಸೆ ವಿದ್ಯುತ್ ದರ ಏರಿಕೆ

4.ಮಾಸಿಕ ಶುಲ್ಕವೂ 20 ರೂಪಾಯಿ ಹೆಚ್ಚಳವಾಗುತ್ತಿದೆ.

5.20 ರೂಪಾಯಿ ಇದ್ದ ನಿಗದಿತ ಶುಲ್ಕ, 140 ರೂಪಾಯಿಗೆ ಏರಿಕೆಯಾಗಲಿದೆ

6.ಗೃಹಜ್ಯೋತಿ ಬಳಕೆದಾರರು 200 ಯೂನಿಟ್ ದಾಟಿದರೆ, ಬೆಲೆ ಏರಿಕೆ

7.ಬೆಂಗಳೂರಿನ ಜನರಿಗೆ ಕಸದ ಸಂಗ್ರಹದ ಸೆಸ್​ ಹೆಚ್ಚಳ ಮಾಡಿರುವುದು ಶಾಕ್ ಕೊಡಲಿದೆ.

8.ಉಕ್ಕು, ವಾಹನಗಳ ಬಿಡಿಭಾಗಳ ಆಮದು, ಉಕ್ಕುಗಳ ಆಮದು ದರ ಹೆಚ್ಚಾಗುತ್ತಿದೆ. ಇದರ ಪರಿಣಾಮ ಇಂದಿನಿಂದ ಹೊಸ ವಾಹನ ಖರೀದಿಸಿದರೆ ಬೆಲೆ ಹೆಚ್ಚಲಾ.

9.ಮುದ್ರಾಂಕ ಶುಲ್ಕ 50 ರೂಪಾಯಿಯಿಂದ 500 ರೂಪಾಯಿಗೆ ಏರಿಕೆ ಆಗಲಿದ್ದು, ಅಫಿಡವಿಟ್ ಶುಲ್ಕ 20 ರೂಪಾಯಿಯಿಂದ 100 ರೂಪಾಯಿಗೆ ಏರಿಕೆ ಆಗುತ್ತಿದೆ.

10.ಹೆದ್ದಾರಿ ಪ್ರಾಧಿಕಾರ ಕೂಡ ಟೋಲ್ ದರವನ್ನು ಶೇಕಡಾ 3 ರಿಂದ 5 ರಷ್ಟು ಹೆಚ್ಚಳ ಮಾಡುತ್ತಿದ್ದು, ಇಂದಿನಿಂದಲೇ ಜಾರಿಗೆ ಬರುತ್ತಿದೆ.

11.ಇಂಧನ ಇಲಾಖೆಯ ಡಿಪಾರ್ಟ್​ಮೆಂಟ್ ಆಫ್ ಎಲೆಕ್ಟ್ರಿಲ್ ಇನ್ಸ್​ಪೆಕ್ಟೋರೇಟ್ ಸಹ, ಮನೆಯ ಲಿಫ್ಟ್​ ಪರಿಶೀಲನೆ ಮತ್ತು ರಿನಿವಲ್ ಹಾಗೂ ಟ್ರಾನ್ಸ್​ಫಾರ್ಮರ್ ಪರಿಶೀಲನೆ ಮತ್ತು ರಿನಿವಲ್ ಮಾಡುವ ಶುಲ್ಕವನ್ನು ದುಪಟ್ಟು ಹೆಚ್ಚಿಸಿದೆ.

By suddi9

Leave a Reply

Your email address will not be published. Required fields are marked *