ಸುಳ್ಯದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡಿದೆ. ಈ ಘಟನೆ ಮಾರ್ಚ್ 30ರಂದು ನಡೆದಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ತೆರಳುತ್ತಿದ್ದರು. ಚಿರೆಕಲ್‌ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋಗಿ ಬ್ರೇಕ್ ಹಾಕಿದ್ದಾರೆ. ಈ ವೇಳೆ ಬ್ರೇಕ್‌ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ಕಾರು ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮೇಲೆ ಬಿದ್ದಿದೆ.

ಘಟನೆಯಲ್ಲಿ ಕಾರು ಮತ್ತು ಮನೆ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕಿ ಅಪಾಯದಿಂದ ಪಾರಾಗಿದ್ದಾರೆ. ನಂತರ ಕಾರನ್ನು ಕ್ರೇನ್ ಮೂಲಕ ಮೆಲಕ್ಕೆ ಎತ್ತಲಾಗಿದೆ.

By suddi9

Leave a Reply

Your email address will not be published. Required fields are marked *