ಸುಳ್ಯ: ರಸ್ತೆ ಅಪಘಾತದಲ್ಲಿ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಸಾವು

ಸುಳ್ಯ: ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ. ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮಾ. 31ರಂದು ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಅವರು ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಢಿಕ್ಕಿಯಾಗಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ ಎನ್ನಲಾಗಿದೆ.
ಮೃತರು ತಾಯಿ, ಸಹೋದರಿ ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.