ಬಸ್ ಸಂಚಾರಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಮಹಿಳೆಗೆ ಢಿಕ್ಕಿ ಹೊಡೆದು ಇಬ್ಬರು ಸಾವು

ಬಸ್ ಚಾಲಕನಿಗೆ ಸಂಚಾರಿಸುತ್ತಿದ್ದಾಗಲೇ ಹೃದಯಾಘಾತವಾಗಿದೆ. ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಪಾದಾಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ಮತ್ತು ಪಾದಚಾರಿ ಮಹಿಳೆಗೆ ಇಬ್ಬರೂ ಮೃತಪಟ್ಟಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮತ್ತು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಮೃತ ದುರ್ದೈವಿಗಳು.