ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ(2nd PUC Result)ವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90 ಶೇಕಾಡ ಫಲಿತಾಂಶ ಪಡೆದು ಉಡುಪಿ ಮೊದಲ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡದ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ಮಧ್ಯಾಹ್ನ 1.30ರ ಬಳಿಕ ವೀಕ್ಷಿಸಬಹುದು. ಫಲಿತಾಂಶದ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ – 3 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಮತ್ತೊಮ್ಮೆ ಪ್ರಯತ್ನ ಮಾಡಲು ಸಹಕಾರಿಯಾಗಲಿದೆ.