ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ 5 ವಿದ್ಯಾರ್ಥಿಗಳು

ನೆನ್ನೆಯಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಉಡುಪಿ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಬಂದಿದೆ. ಶೇಕಾಡ 73ರಷ್ಟು ಫಲಿತಾಂಶ ಪ್ರಕಟಗೊಂಡಿದೆ. ಆದರೆ ನಮ್ಮ ಫಲಿತಾಂಶ ಬಂದಿಲ್ಲ ಎಂದು ನೊಂದ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲವು ಜಿಲ್ಲೆಗಳಲ್ಲಿ ನಡೆದಿದೆ.ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ಹಾಗೂ ಫೇಲ್ ಆಗುವ ಭಯದಲ್ಲಿ ಕರ್ನಾಟಕದಾದ್ಯಂತ ಐವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರು ಜಿಲ್ಲೆಯ ಒಂಟಿಕೊಪ್ಪಲ್ಲಿನ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೊಂದು ಕಡೆ, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಅಗಸನೂರು ಎಂಬಲ್ಲಿ ವಿಜಯಲಕ್ಷ್ಮಿ ಸಿರಗುಪ್ಪದ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪರೀಕ್ಷೆಯಲ್ಲಿ ಫೇಲಾದ ವಿಷಯ ತಿಳಿದು ಆಘಾತಕ್ಕೊಳಗಾದ, ಕೃಪಾ ಎಂಬ ವಿದ್ಯಾರ್ಥಿನಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ದಾವಣಗೆರೆ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದಳು.ಹಾವೇರಿಯ ಹಂಸಬಾವಿ ಠಾಣಾ ವ್ಯಾಪ್ತಿಯ ಪಿಯುಸಿ ವಿದ್ಯಾರ್ಥಿ ಕಾವ್ಯ ಬಸಪ್ಪ ಲಮಾಣಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಈ ಬಗ್ಗೆ ತನಿಖೆ ಕೂಡ ನಡೆಯುತ್ತಿದೆ.