ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೆ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.

ಬಟವಾಡಿ ಗೇಟ್​ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭ ಮಾಡಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸತುವೆ ಮಾಡಲಾಗುತ್ತಿದೆ. 650 ಕೋಟಿ ರೂ. ವೆಚ್ಚದ 22 ಮೇಲ್ಸತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ.

By suddi9

Leave a Reply

Your email address will not be published. Required fields are marked *