ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಅಪಘಾತ

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಯಾವು ಸಾವು ಸಂಭವಿಸಿಲ್ಲ, ಆದರೆ ಗಂಭೀರ ಗಾಯಗಳಾಗಿವೆ. ಮಿನಿಬಸ್ ಚಾಲಕ ಬಹಳ ಗಂಭೀರವಾಗಿ ಗಾಯಗೊಂಡಿದ್ದಾನೆತನ್ನ ಮುಂದೆ ಚಲಿಸುತ್ತಿದ್ದ ಲಾರಿಯನ್ನು ಓವರ್ಟೇಕ್ ಮಾಡುವ ಭರದಲ್ಲಿ, ಮಿನಿಬಸ್ ಡ್ರೈವರ್ ಅದಕ್ಕೆ ಗುದ್ದಿದ್ದಾನೆ. ಬಸ್ಸಲ್ಲಿದ್ದ ಇತರ ಆರೇಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.